ಹರಿಹರ,ಸೆ.29: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ರಾಜ್ಯದಾದ್ಯಂತ ವಿವಿಧ ಸಂಘಟನೆಯವರು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವುದನ್ನು ಬೆಂಬಲಿಸಿ ನಗರದಲ್ಲಿ ವಿವಿಧ ಸಂಘಟನೆಯ ನೇತೃತ್ವದಲ್ಲಿ ಹರಿಹರ ಬಂದ್ ಮಾಡಿ ತಹಶಿಲ್ದಾರ್ ಕಚೇರಿಗೆ ತೆರಳಿ ಮನವಿಯನ್ನು ಅರ್ಪಿಸಲಾಗುತ್ತದೆ ಎಂದು ವಿವಿಧ ಸಂಘಟನೆಯ ಮುಖಂಡರು ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ.
ಸಂಘಟನೆಗಳ ಮೂಲಕ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಎಲ್ಲಾ ವ್ಯಾಪಾರ ವಹಿವಾಟು ಬಂದ್ ಮಾಡುವ ಮೂಲಕ ರಾಜ್ಯದಲ್ಲಿ ಕರೆ ಕೊಟ್ಟಿರುವ ಸಂಘಟನೆಗಳಿಗೆ ಬೆಂಬಲವನ್ನು ನೀಡಲಾಗುತ್ತದೆ. ಈಗಾಗಲೇ ಹರಿಹರ ನಗರದಲ್ಲಿ ಕೂಡ ಕರ್ನಾಟಕ ರಕ್ಷಣಾ ವೇದಿಕೆ, ಪುಟ್ ಪಾತ್ ವ್ಯಾಪಾರಿಗಳ ಸಂಘ, ಕನ್ನಡ ಸಾಹಿತ್ಯ ಪರಿಷತ್ತು, ಜಯ ಕರ್ನಾಟಕ ಸಂಘಟನೆ, ಆಟೋ ಚಾಲಕರು ಮತ್ತು ಮಾಲಿಕರ ಸಂಘ, ಹೋಟೆಲ್ ಮತ್ತು ಬೇಕರಿ ಉತ್ಪನ್ನಗಳ ಸಂಘ, ಡಿಎಸ್ ಎಸ್ ಸಂಘಟನೆಗಳು ಸೇರಿದಂತೆ 15 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲವನ್ನು ನೀಡಿದ್ದು ಅದ್ದರಿಂದ ನಗರದ ಎಲ್ಲಾ ವ್ಯಾಪಾರಸ್ಥರು ತಮ್ಮ ತಮ್ಮ ಅಂಗಡಿ ಮುಗ್ಗಟ್ಟನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡುವ ಮೂಲಕ ಬಂದ್ ಗೆ ಬೆಂಬಲವನ್ನು ನೀಡುವಂತೆ ಹೇಳಿದರು.