-8 C
New York
Monday, December 23, 2024

Buy now

spot_img

ಆಶಾ ಕಾರ್ಯಕರ್ತೆಯರಿಗೆ ಮಲೇರಿಯಾ ನಿರ್ಮೂಲನೆಗೆ ಸಹಕರಿಸಿ: ಡಿಹೆಚ್‍ಓ ಡಾ.ಜಿ.ಪಿ.ರೇಣುಪ್ರಸಾದ್

ಚಿತ್ರದುರ್ಗ: ಮಲೇರಿಯಾ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ಹತೋಟಿ ಮತ್ತು ನಿರ್ಮೂಲನೆ ಮಾಡಲು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಗುಣಮಟ್ಟದ ಜ್ವರ ಸಮೀಕ್ಷೆ ಹಾಗೂ ರಕ್ತ ಪರೀಕ್ಷೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ ರೇಣುಪ್ರಸಾದ್ ಹೇಳಿದರು.

ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಗುರುವಾರ ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣ ಕಚೇರಿ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಎರಡು ದಿನಗಳ ಮಲೇರಿಯಾ ಹಾಗೂ ಇತರೆ ಕೀಟಜನ್ಯ ರೋಗಗಳ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮಲೇರಿಯಾ ಎಂದು ದೃಢಪಟ್ಟಲ್ಲಿ ಪೂರ್ಣ ಚಿಕಿತ್ಸೆ ನೀಡುವುದು ಹಾಗೂ ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳಾದ ಸೊಳ್ಳೆ ಪರದೆ ಬಳಸುವುದು. ಬೇವಿನಸೊಪ್ಪಿನ ಹೊಗೆ ಹಾಕುವುದು ಇನ್ನು ಮುಂತಾದ ಕ್ರಮಗಳನ್ನು ಅನುಸರಿಸುವಂತೆ ಆರೋಗ್ಯ ಶಿಕ್ಷಣ ನೀಡಿ ರೋಗವನ್ನು ಹತೋಟಿಗೆ ತರುವಂತೆ ಕರೆ ನೀಡಿದರು.
ರಾಜ್ಯ ಕಣ್ಗಾವಲು ಘಟಕದ ಉಪನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ. ಪದ್ಮಾ ಮಾತನಾಡಿ, ನೀತಿ ಆಯೋಗದ ಮಾನದಂಡಗಳಂತೆ ಆರೋಗ್ಯ ಇಲಾಖೆಯ ಚಟುವಟಿಕೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಎಂದು ಹೇಳಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎನ್.ಕಾಶಿ, ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿ ಕಡಿ, ಡಿ.ಎಂ.ಓ ಕಚೇರಿಯ ಆರೋಗ್ಯ ಮೇಲ್ವಿಚಾರಕ ಟಿ. ಮಲ್ಲಿಕಾರ್ಜುನ್, ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿಗಳಾದ ಶ್ರೀನಿವಾಸ, ಬಿ.ಆರ್. ನಾಗರಾಜ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಹೆಚ್.ಎ. ನಾಗರಾಜ್, ಲೋಕೇಶ, ಪಾಂಡು ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles