-1.1 C
New York
Tuesday, December 24, 2024

Buy now

spot_img

ಪಿಎಂಎಸ್‍ಬಿವೈ ಯೋಜನೆಯಡಿ ಅಪಘಾತ ಪರಿಹಾರ

ಶಿವಮೊಗ್ಗ,ಅ.20 : ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಂದ ನೊಂದಾಯಿಸಲಾಗುತ್ತಿದೆ.
ದಿ: 31-03-2022 ರವರೆಗೆ ನೋಂದಣಿಯಾದ ಮತ್ತು ಈ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್ಬಿವೈ) ಯಡಿ ರೂ.2 ಲಕ್ಷಗಳ ಅಪಘಾತ ಪರಿಹಾರವನ್ನು ಒದಗಿಸಲಾಗುವುದು.
ಅಪಘಾತದಿಂದ ಮರಣ ಹೊಂದಿದ್ದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್(ಇ-ಶ್ರಮ್ ಕಾರ್ಡ್)/ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್ಐಆರ್/ಪಂಚನಾಮ, ಕ್ಲೇಮುದಾರ ಮೈನರ್ ಆಗಿದ್ದರೆ ಜಿಲ್ಲಾ ನ್ಯಾಯಾಲದಿಂದ ನಿಡಲಾಗುವ ಗಾರ್ಡಿಯನ್ಶಿಪ್ ಪ್ರಮಾಣ ಪತ್ರ ಸಲ್ಲಿಸಬೇಕು.
ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್(ಇ-ಶ್ರಮ್ ಕಾರ್ಡ್)/ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶವನ್ನು ಒಳಗೊಂಡಿರುವ ಆಸ್ಪತ್ರೆಯ ದಾಖಲೆ, ಅಂಗವೈಕಲ್ಯ ಪ್ರಮಾಣ ಪತ್ರ ಅಥವಾ ಯುಡಿಐದಿ ಕಾರ್ಡ್ ನ್ನು ಸಲ್ಲಿಸಬೇಕು.
ಮೇಲೆ ತಿಳಿಸಿದ ಸೂಕ್ತ ದಾಖಲೆಗಳೊಂದಿಗೆ ಕಾರ್ಮಿಕ ಅಧಿಕಾರಿಗಳ ಕಚೇರಿ, ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ 2ನೇ ಮಹಡಿ, ವಾಣಿಜ್ಯ ಸಂಕೀರ್ಣ ಸಿಐಟಿಬಿ(ಸೂಡ) ಕಾಂಪ್ಲೆಕ್ಸ್, ವಿನೋಬನಗರ, ಶಿವಮೊಗ್ಗ ಇಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸುಮಾ ಹೆಚ್ ಎಸ್ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles