ದಾವಣಗೆರೆ; ಅ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ವಿವಿಧ ಇಲಾಖೆಗಳÀ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಅಕ್ಟೋಬರ್ 28 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಬೆಳಿಗ್ಗೆ 9 ಗಂಟೆಗೆ ನಗರದ ಹೊಂಡದ ವೃತ್ತದಲ್ಲಿರುವ ಶ್ರೀ ರಾಜವೀರ ಮದಕರಿ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು.
ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ. ಜಿ.ಎಂ ಸಿದ್ದೇಶ್ವರ, ಮಾಯಕೊಂಡ ಶಾಸಕ ಕೆ.ಎಸ್ ಬಸವಂತಪ್ಪ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಜಗಳೂರು ಶಾಸಕ ಬಿ. ದೇವೇಂದ್ರಪ್ಪ, ಶಾಸಕ ಬಿ.ಪಿ ಹರೀಶ್, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ವಿಧಾನ ಪರಿಷತ್ ಶಾಸಕರಾದ ಕೆ.ಪಿ ನಂಜುAಡಿ ವಿಶ್ವಕರ್ಮ, ರವಿಕುಮಾರ್.ಎನ್, ಡಾ.ತೇಜಸ್ವಿನಿ ಗೌಡ, ಎಸ್. ಎಲ್ ಭೋಜೇಗೌಡ, ಡಾ ವೈ.ಎ ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ ಇಟ್ನಾಳ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬೇಬಿ ಸುನಿತಾ.ಕೆ ಉಪಸ್ಥಿತರಿರುವರು.