-10.2 C
New York
Monday, December 23, 2024

Buy now

spot_img

ಆಡಳಿತದಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಇರಲಿ ಅಧಿಕಾರಿಗಳಿಗೆ ಶಾಸಕರಾದ ಬಸವರಾಜು ವಿ ಶಿವಗಂಗಾ ಸೂಚನೆ

ಚನ್ನಗಿರಿ, ಅ.16 : ಸರ್ಕಾರಿ ಕೆಲಸ ಎಂದರೆ ದೇವರ ಕೆಲಸವಿದ್ದಂತೆ, ಪ್ರಾಮಾಣಿಕವಾಗಿ ನಿಷ್ಠೆಯಿಂದ ಸಾರ್ವಜನಿಕರ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಶಾಸಕರಾದ ಬಸವರಾಜು ವಿ ಶಿವಗಂಗಾ ಸೂಚಿಸಿದರು.

ತಾಲ್ಲೂಕಿನ ದೇವರಹಳ್ಳಿ ಗ್ರಾಮದ ನಾಡಕಚೇರಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದರೆ ಸೂಕ್ತ ಕ್ರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಸಾರ್ವಜನಿಕರು ಸರ್ಕಾರಿ ಕಚೇರಿಗೆ ಬಂದರೆ ಅವರೊಂದಿಗೆ ತಾಳ್ಮೆಯಿಂದ ವರ್ತನೆ ಮಾಡಬೇಕು, ಕಚೇರಿಗೆ ಪದದೇ ಪದೇ ಜನರನ್ನು ಅಲೆದಾಡಿಸಬಾರದೆಂದು ತಿಳಿಸಿದರು. ಇದೇವೇಳೆ ನಾಡ ಕಚೆರಿಗೆ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನ ಆಲಿಸಿ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಇನ್ನೂ ಕಚೇರಿಯಲ್ಲಿನ ಕಂಪ್ಯೂಟರ್‍ನ್ನು ತಾವೇ ಸ್ವತಃ ಪರಿಶೀಲನೆ ಮಾಡಿ ದಾಖಲೆಗಳ ಮಾಹಿತಿ ಪಡೆದುಕೊಂಡರು. ಕ್ಷೇತ್ರದ ಜನರ ತಮ್ಮ ಸಮಸ್ಯೆಗಳಿಗೆ ನೀಡಿದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು, ವಿನಃ ಕಾರಣ ಅರ್ಜಿಗಳನ್ನು ಇಟ್ಟುಕೊಳ್ಳಬಾರದೆಂದು ಕಚೇರಿ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದರು. ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಬೇಕು, ಸಾರ್ವಜನಿಕರು ಈ ಬಗ್ಗೆ ದೂರು ನೀಡಿದರೆ ಕ್ರಮ ಜರುಗಿಸುತ್ತೇವೆ ಎಂದರು. ಈ ವೇಳೆ ನಾಡಕಚೇರಿ ಸಿಬ್ಬಂದಿ ವಗ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles