ನಗರದಲ್ಲಿ ವಿವಿಧ ಸಂಘಟನೆಯ ನೇತೃತ್ವದಲ್ಲಿ ಹರಿಹರ ಬಂದ್

ಹರಿಹರ,ಸೆ.29: ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ರಾಜ್ಯದಾದ್ಯಂತ ವಿವಿಧ ಸಂಘಟನೆಯವರು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವುದನ್ನು ಬೆಂಬಲಿಸಿ ನಗರದಲ್ಲಿ ವಿವಿಧ ಸಂಘಟನೆಯ ನೇತೃತ್ವದಲ್ಲಿ ಹರಿಹರ ಬಂದ್ ಮಾಡಿ ತಹಶಿಲ್ದಾರ್ ಕಚೇರಿಗೆ ತೆರಳಿ ಮನವಿಯನ್ನು ಅರ್ಪಿಸಲಾಗುತ್ತದೆ ಎಂದು ವಿವಿಧ ಸಂಘಟನೆಯ ಮುಖಂಡರು ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ.

ಸಂಘಟನೆಗಳ ಮೂಲಕ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಎಲ್ಲಾ ವ್ಯಾಪಾರ ವಹಿವಾಟು ಬಂದ್ ಮಾಡುವ ಮೂಲಕ ರಾಜ್ಯದಲ್ಲಿ ಕರೆ ಕೊಟ್ಟಿರುವ ಸಂಘಟನೆಗಳಿಗೆ ಬೆಂಬಲವನ್ನು ನೀಡಲಾಗುತ್ತದೆ. ಈಗಾಗಲೇ ಹರಿಹರ ನಗರದಲ್ಲಿ ಕೂಡ ಕರ್ನಾಟಕ ರಕ್ಷಣಾ ವೇದಿಕೆ, ಪುಟ್ ಪಾತ್ ವ್ಯಾಪಾರಿಗಳ ಸಂಘ, ಕನ್ನಡ ಸಾಹಿತ್ಯ ಪರಿಷತ್ತು, ಜಯ ಕರ್ನಾಟಕ ಸಂಘಟನೆ, ಆಟೋ ಚಾಲಕರು ಮತ್ತು ಮಾಲಿಕರ ಸಂಘ,  ಹೋಟೆಲ್ ಮತ್ತು ಬೇಕರಿ ಉತ್ಪನ್ನಗಳ ಸಂಘ, ಡಿಎಸ್ ಎಸ್ ಸಂಘಟನೆಗಳು ಸೇರಿದಂತೆ 15 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲವನ್ನು ನೀಡಿದ್ದು ಅದ್ದರಿಂದ ನಗರದ ಎಲ್ಲಾ ವ್ಯಾಪಾರಸ್ಥರು ತಮ್ಮ ತಮ್ಮ ಅಂಗಡಿ ಮುಗ್ಗಟ್ಟನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡುವ ಮೂಲಕ ಬಂದ್ ಗೆ ಬೆಂಬಲವನ್ನು ನೀಡುವಂತೆ ಹೇಳಿದರು.

ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಹೆಚ್.ಕೆ. ಕೊಟ್ರಪ್ಪ ಮಾಜಿ ದೂಡ ಸದಸ್ಯ ಹೆಚ್. ನಿಜಗುಣ, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಗೌರವಧ್ಯಕ್ಷ ಸಿದ್ದಲಿಂಗಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಂ. ಚಿದಾನಂದ ಕಂಚಿಕೇರಿ, ಕರ್ನಾಟಕ ರಕ್ಷಣಾ ವೇದಿಕೆಯ ರಮೇಶ್ ಮಾನೆ, ಪ್ರೀತಂ ಬಾಬು, ಇಲಿಯಾಸ್ ಆಹ್ಮದ್ ಜಯ ಕರ್ನಾಟಕ ಸಂಘಟನೆಯ ಗೋವಿಂದ್, ಮಂಜುನಾಥ್ ಶಬರೀಶ್, ಡಿಎಸ್ ಎಸ್ ಸಂಘಟನೆಯ ಶ್ರೀನಿವಾಸ್,   ಶ್ರೀನಿವಾಸ್, ಶಶಿನಾಯ್ಕ್, ಕಾಳಿ ಪ್ರಸಾದ್, ಪ್ರಕಾಶ್ ಇತರರು  ಹಾಜರಿದ್ದರು.

LEAVE A REPLY

Please enter your comment!
Please enter your name here