ಬಳ್ಳಾರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ಬಳ್ಳಾರಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಬುಧವಾರ ಸ್ವಚ್ಛತಾ ಕಾರ್ಯ ನಡೆಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಎಸ್.ಹೆಚ್. ಪುಷ್ಪಾಂಜಲಿ ದೇವಿ ಅವರು ಮಾತನಾಡಿ, ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಎಲ್ಲರೂ ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.
ರಾಷ್ಟ್ರೀಯ ಸ್ವಚ್ಛತಾ ಸಪ್ತಾಹವು ಸೆ.25ರಿಂದ ಅ.02ರವರೆಗೆ ನಡೆಯುತ್ತಿದ್ದು, ಯಾವುದೇ ಭೇದ-ಬಾವವಿಲ್ಲದೇ ಪ್ರತಿಯೊಬ್ಬರೂ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಕರೆ ನೀಡಿದರು.
ಬಳ್ಳಾರಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯ
ಈ ಸಂದರ್ಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಿನಯ್.ಡಿ, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ, ಪ್ರಿನ್ಸಿಪಲ್ ಹಿರಿಯ ಶ್ರೇಣಿ ಹಾಗೂ ಸಿಜೆಎಂ ನ್ಯಾಯಾಧೀಶರಾದ ಸತೀಶ್ ಜೆ.ಬಾಳಿ, ಪ್ರಿನ್ಸಿಪಲ್ ಕಿರಿಯ ಶ್ರೇಣಿ ಹಾಗೂ ಸಿಜೆಎಂ ನ್ಯಾಯಾಧೀಶರಾದ ಅಮೀತ್ ಘಟ್ಟಿ, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅಪರ್ಣ, 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ವಿಮಲ್ ಆರ್.ನಂದಾಗಾಂವ್, ಪ್ರಿನ್ಸಿಪಲ್ ಕೌಟುಂಬಿಕ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ, 5ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಮುದುಕಪ್ಪ ಒಡನ್, 1ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಈರಪ್ಪ ದವಳೇಶ್ವರ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.