ಯಾದಗಿರಿ: ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತಿದ್ದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ಸೇರಿದಂತೆ ಐದು ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಕ್ಟೋಬರ್ 28 ಮತ್ತು 29ರಂದು ಕೆಇಎ ಪರೀಕ್ಷೆ ನಡೆಸುತ್ತಿದೆ. ರಾಜ್ಯಾದ್ಯಂತ ಇಂದು 350 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾದಗಿರಿಯ ಪರೀಕ್ಷಾ ಕೇಂದ್ರವೊAದರಲ್ಲಿ ನಕಲು ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಅಫಜಲಪುರದವನು ಎಂದು ತಿಳಿದುಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ಬಳಿಯಿದ್ದ ಬ್ಲೂಟೂತ್ ಡಿವೈಸ್, ಮೊಬೈಲ್ ಅನ್ನು ಜಪ್ತಿ ಮಾಡಿದ್ದಾರೆ.